ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ }[PS]*ದಾವೀದನ ಕೀರ್ತನೆ. [BR]ಕೀರ್ತ 140 *[PE][QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; [QE][QS]ನನ್ನ ಬಿನ್ನಹಕ್ಕೆ ಕಿವಿಗೊಡು; [QE][QS]ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. [QE]
2. [QS]ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; [QE][QS]ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. [QE]
3. [QS]ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; [QE][QS]ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. [QE][QS]ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; [QE][QS]ಬಹು ಕಾಲದಿಂದ ಸತ್ತವರಂತಿದ್ದೇನೆ. [QE]
4. [QS]ನನ್ನ ಆತ್ಮವು ಕುಂದಿಹೋಗಿದೆ; [QE][QS]ನನ್ನ ಮನಸ್ಸು ಬೆರಗಾಗಿದೆ. [QE]
5. [QS]ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; [QE][QS]ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; [QE][QS]ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; [QE]
6. [QS]ಕೈಚಾಚಿ ಬೇಡುತ್ತೇನೆ; [QE][QS]ಒಣನೆಲವು ನೀರಿಗಾಗಿ ಹೇಗೋ, [QE][QS]ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. [QE][QSS]ಸೆಲಾ[QSE]
7. [QS]ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; [QE][QS]ನನ್ನ ಆತ್ಮವು ಕುಂದಿಹೋಗಿದೆ. [QE][QS]ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. [QE]
8. [QS]ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; [QE][QS]ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. [QE][QS]ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; [QE][QS]ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QE]
9. [QS]ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; [QE][QS]ಶತ್ರುಗಳಿಂದ ನನ್ನನ್ನು ಬಿಡಿಸು. [QE]
10. [QS]ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, [QE][QS]ನನ್ನ ದೇವರು ನೀನಲ್ಲವೋ? [QE][QS]ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. [QE]
11. [QS]ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; [QE][QS]ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. [QE]
12. [QS]ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. [QE][QS]ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; [QE][QS]ನಾನು ನಿನ್ನ ಸೇವಕನಲ್ಲವೇ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 143 / 150
ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ 3 *ದಾವೀದನ ಕೀರ್ತನೆ.
ಕೀರ್ತ 140 *
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. 2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. 3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ. 4 ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ. 5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; 6 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. QSS ಸೆಲಾSE 7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. 8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. 9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು. 10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. 11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. 12 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 143 / 150
×

Alert

×

Kannada Letters Keypad References