3. {#3ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ }[PS]*ದಾವೀದನ ಕೀರ್ತನೆ. [BR]ಕೀರ್ತ 18; ಧರ್ಮೋ 33:26-29 *[PE][QS]ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. [QE][QS]ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, [QE][QS]ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ. [QE]
2. [QS]ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, [QE][QS]ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, [QE][QS][* ಅಥವಾ ನನ್ನ ಜನವನ್ನು ]ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ. [QE]
3. [QS]ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? [QE][QS]ಅವನನ್ನು ನೀನು ಏಕೆ ನೆನಸಬೇಕು? [QE][QS]ಮಾನವನು ಎಷ್ಟರವನು? [QE][QS]ಅವನಲ್ಲಿ ಏಕೆ ಲಕ್ಷ್ಯವಿಡಬೇಕು? [QE]
4. [QS]ಮನುಷ್ಯನು ಬರೀ ಉಸಿರೇ, [QE][QS]ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ. [QE]
5. [QS]ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, [QE][QS]ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು. [QE]
6. [QS]ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, [QE][QS]ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು. [QE]
7. [QS]ಮೇಲಣ ಲೋಕದಿಂದ ಕೈಚಾಚಿ, [QE][QS]ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ. [QE]
8. [QS]ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ [QE][QS]ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು. [QE]
9. [QS]ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, [QE][QS]ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. [QE]
10. [QS]ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು [QE][QS]ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ. [QE]
11. [QS]ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ [QE][QS]ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು. [QE]
12. [QS]ಯೌವನಸ್ಥರಾದ ನಮ್ಮ ಗಂಡುಮಕ್ಕಳು [QE][QS]ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, [QE][QS]ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು. [QE]
13. [QS]ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, [QE][QS]ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು. [QE]
14. [QS]ನಮ್ಮ ಪಶುಗಳು ಅಸಂಖ್ಯಾತವಾಗಲಿ, [QE][QS]ವೈರಿಗಳು ಒಳಗೆ ನುಗ್ಗುವುದಾಗಲಿ, [QE][QS]ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, [QE][QS]ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ. [QE]
15. [QS]ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, [QE][QS]ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು. [QE]