1. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, [QBR] ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. [QBR]
2. ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, [QBR] ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು. [QBR]
3. ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, [QBR] ಆತನ ಮಹತ್ತು ಅಪಾರವಾದದ್ದು. [QBR]
4. ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, [QBR] ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. [QBR]
5. [* ಕೆಲವು ಹಸ್ತಪ್ರತಿಗಳಲ್ಲಿ ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವೆನು ಎಂದು ಇದೆ. ] ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, [QBR] ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. [QBR]
6. ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. [QBR] ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. [QBR]
7. ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, [QBR] ನಿನ್ನ ನೀತಿಯನ್ನು ಹೊಗಳುವರು. [QBR]
8. ಯೆಹೋವನು ದಯೆಯು, ಕನಿಕರವು ಉಳ್ಳವನು, [QBR] ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. [QBR]
9. ಯೆಹೋವನು ಸರ್ವೋಪಕಾರಿಯು, [QBR] ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. [QBR]
10. ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, [QBR] ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. [QBR]
11. ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, [QBR] ನಿನ್ನ ಪ್ರತಾಪವನ್ನು ವರ್ಣಿಸುವರು. [QBR]
12. ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, [QBR] ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. [QBR]
13. [† ಕೆಲವು ಹಸ್ತಪ್ರತಿಗಳಲ್ಲಿ ಯೆಹೋವನು ತನ್ನ ಎಲ್ಲ ವಾಗ್ದಾನಗಳಲ್ಲಿ ನಂಬಿಗಸ್ತನು, ತನ್ನ ಎಲ್ಲಾ ಕ್ರಿಯೆಗಳಲ್ಲಿ ಕರುಣೆಯುಳ್ಳವನು ಆಗಿದ್ದಾನೆ ಎಂದು ಇದೆ.] ನಿನ್ನ ರಾಜ್ಯವು ಶಾಶ್ವತವಾಗಿದೆ, [QBR] ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು. [QBR]
14. ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, [QBR] ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. [QBR]
15. ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, [QBR] ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. [QBR]
16. ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. [QBR]
17. ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, [QBR] ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. [QBR]
18. ಯೆಹೋವನಿಗೆ ಮೊರೆಯಿಡುವವರು, [QBR] ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. [QBR]
19. ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, [QBR] ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ. [QBR]
20. ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, [QBR] ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. [QBR]
21. ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, [QBR] ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು [QBR] ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ. [PE]