3. {#3ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ }[PS]*ದಾವೀದನ ಕೀರ್ತನೆ. *[PE][QS]ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, [QE][QS]ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. [QE]
2. [QS]ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, [QE][QS]ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು. [QE]
3. [QS]ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, [QE][QS]ಆತನ ಮಹತ್ತು ಅಪಾರವಾದದ್ದು. [QE]
4. [QS]ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, [QE][QS]ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. [QE]
5. [QS] [* ಕೆಲವು ಹಸ್ತಪ್ರತಿಗಳಲ್ಲಿ ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವೆನು ಎಂದು ಇದೆ. ]ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, [QE][QS]ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. [QE]
6. [QS]ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. [QE][QS]ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. [QE]
7. [QS]ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, [QE][QS]ನಿನ್ನ ನೀತಿಯನ್ನು ಹೊಗಳುವರು. [QE]
8. [QS]ಯೆಹೋವನು ದಯೆಯು, ಕನಿಕರವು ಉಳ್ಳವನು, [QE][QS]ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. [QE]
9. [QS]ಯೆಹೋವನು ಸರ್ವೋಪಕಾರಿಯು, [QE][QS]ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. [QE]
10. [QS]ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, [QE][QS]ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. [QE]
11. [QS]ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, [QE][QS]ನಿನ್ನ ಪ್ರತಾಪವನ್ನು ವರ್ಣಿಸುವರು. [QE]
12. [QS]ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, [QE][QS]ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. [QE]
13. [QS] [† ಕೆಲವು ಹಸ್ತಪ್ರತಿಗಳಲ್ಲಿ ಯೆಹೋವನು ತನ್ನ ಎಲ್ಲ ವಾಗ್ದಾನಗಳಲ್ಲಿ ನಂಬಿಗಸ್ತನು, ತನ್ನ ಎಲ್ಲಾ ಕ್ರಿಯೆಗಳಲ್ಲಿ ಕರುಣೆಯುಳ್ಳವನು ಆಗಿದ್ದಾನೆ ಎಂದು ಇದೆ. ]ನಿನ್ನ ರಾಜ್ಯವು ಶಾಶ್ವತವಾಗಿದೆ, [QE][QS]ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು. [QE]
14. [QS]ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, [QE][QS]ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. [QE]
15. [QS]ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, [QE][QS]ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. [QE]
16. [QS]ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. [QE]
17. [QS]ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, [QE][QS]ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. [QE]
18. [QS]ಯೆಹೋವನಿಗೆ ಮೊರೆಯಿಡುವವರು, [QE][QS]ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. [QE]
19. [QS]ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, [QE][QS]ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ. [QE]
20. [QS]ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, [QE][QS]ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. [QE]
21. [QS]ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, [QE][QS]ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು [QE][QS]ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ. [QE]