1. ಯೆಹೋವನಿಗೆ ಸ್ತೋತ್ರ! [QBR] ನನ್ನ ಮನವೇ, ಯೆಹೋವನನ್ನು ಸ್ತುತಿಸು. [QBR]
2. ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, [QBR] ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. [QBR]
3. ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, [QBR] ಅವರು ಸಹಾಯ ಮಾಡ ಶಕ್ತರಲ್ಲ, [QBR]
4. ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, [QBR] ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. [QBR]
5. ಯಾರಿಗೆ ಯಾಕೋಬನ ದೇವರು ಸಹಾಯಕನೋ, [QBR] ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, [QBR] ಅವನೇ ಧನ್ಯನು. [QBR]
6. ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, [QBR] ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, [QBR]
7. ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, [QBR] ಹಸಿದವರಿಗೆ ಆಹಾರ ಕೊಡುವವನೂ ಆತನೇ. [QBR] ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. [QBR]
8. ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. [QBR] ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. [QBR] ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. [QBR]
9. ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. [QBR] ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. [QBR] ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. [QBR]
10. ಯೆಹೋವನು ಸದಾಕಾಲವೂ ಅರಸನಾಗಿರುವನು, [QBR] ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, [QBR] ಯೆಹೋವನಿಗೆ ಸ್ತೋತ್ರ! [PE]