ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು } [QS]ಯೆಹೋವನಿಗೆ ಸ್ತೋತ್ರ! [QE][QS]ನನ್ನ ಮನವೇ, ಯೆಹೋವನನ್ನು ಸ್ತುತಿಸು. [QE]
2. [QS]ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, [QE][QS]ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. [QE]
3. [QS]ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, [QE][QS]ಅವರು ಸಹಾಯ ಮಾಡ ಶಕ್ತರಲ್ಲ, [QE]
4. [QS]ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, [QE][QS]ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. [QE]
5. [QS]ಯಾರಿಗೆ ಯಾಕೋಬನ ದೇವರು ಸಹಾಯಕನೋ, [QE][QS]ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, [QE][QS]ಅವನೇ ಧನ್ಯನು. [QE]
6. [QS]ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, [QE][QS]ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, [QE]
7. [QS]ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, [QE][QS]ಹಸಿದವರಿಗೆ ಆಹಾರ ಕೊಡುವವನೂ ಆತನೇ. [QE][QS]ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. [QE]
8. [QS]ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. [QE][QS]ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. [QE][QS]ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. [QE]
9. [QS]ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. [QE][QS]ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. [QE][QS]ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. [QE]
10. [QS]ಯೆಹೋವನು ಸದಾಕಾಲವೂ ಅರಸನಾಗಿರುವನು, [QE][QS]ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, [QE][QS]ಯೆಹೋವನಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 146 / 150
ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು 1 ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. 2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. 3 ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ, 4 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. 5 ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. 6 ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, 7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. 10 ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 146 / 150
×

Alert

×

Kannada Letters Keypad References