1. ಯೆಹೋವನಿಗೆ ಸ್ತೋತ್ರ! [QBR] ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, [QBR] ಆತನನ್ನು ಕೀರ್ತಿಸುವುದು ಯುಕ್ತವಾಗಿದೆ. [QBR]
2. ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, [QBR] ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ, [QBR]
3. ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, [QBR] ಅವರ ಗಾಯಗಳನ್ನು ಕಟ್ಟುತ್ತಾನೆ. [QBR]
4. ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, [QBR] ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ. [QBR]
5. ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, [QBR] ಆತನ ಜ್ಞಾನವು ಅಪರಿಮಿತವಾಗಿದೆ. [QBR]
6. ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, [QBR] ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ. [QBR]
7. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, [QBR] ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ. [QBR]
8. ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, [QBR] ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, [QBR] ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. [QBR]
9. ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ [QBR] ಬೇಕಾದ ಆಹಾರಕೊಡುತ್ತಾನೆ. [QBR]
10. ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, [QBR] ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ. [QBR]
11. ಯೆಹೋವನು ಆನಂದಿಸುವುದು [QBR] ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ. [QBR]
12. ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, [QBR] ಚೀಯೋನೇ, ನಿನ್ನ ದೇವರನ್ನು ಸ್ತುತಿಸು. [QBR]
13. ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, [QBR] ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ. [QBR]
14. ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, [QBR] ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. [QBR]
15. ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, [QBR] ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. [QBR]
16. ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, [QBR] ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ. [QBR]
17. ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, [QBR] ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು? [QBR]
18. ಆತನು ಅಪ್ಪಣೆಕೊಡಲು ಅವು ಕರಗುತ್ತವೆ, [QBR] ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ. [QBR]
19. ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, [QBR] ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. [QBR]
20. ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, [QBR] ಆತನ ನ್ಯಾಯವಿಧಿಗಳನ್ನು ಅವರು ಅರಿಯರು. [QBR] ಯೆಹೋವನಿಗೆ ಸ್ತೋತ್ರ! [PE]