1. {#3ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ } [QS]ಯೆಹೋವನಿಗೆ ಸ್ತೋತ್ರ! [QE][QS]ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, [QE][QS]ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. [QE]
2. [QS]ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, [QE][QS]ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ. [QE]
3. [QS]ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, [QE][QS]ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. [QE]
4. [QS]ಉನ್ನತೋನ್ನತವಾದ ಆಕಾಶವೇ, [QE][QS]ಅದರ ಮೇಲಿರುವ ಜಲರಾಶಿಗಳೇ, [QE][QS]ಆತನನ್ನು ಸ್ತುತಿಸಿರಿ. [QE]
5. [QS]ಅವು ಯೆಹೋವನ ನಾಮವನ್ನು ಸ್ತುತಿಸಲಿ, [QE][QS]ಆತನು ಅಪ್ಪಣೆಕೊಡಲು ಅವು ಉಂಟಾದವು. [QE]
6. [QS]ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, [QE][QS]ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ. [QE]
7. [QS]ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. [QE][QS]ತಿಮಿಂಗಿಲಗಳು, ಆದಿಸಾಗರಗಳು [QE]
8. [QS]ಬೆಂಕಿ,[* ಬೆಂಕಿ, ಮಿಂಚು. ] ಕಲ್ಮಳೆ, ಹಿಮ, ಹಬೆ ಇವುಗಳು, [QE][QS]ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, [QE]
9. [QS]ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, [QE][QS]ಎಲ್ಲಾ ತುರಾಯಿ ಮರಗಳು, [QE]
10. [QS]ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, [QE]
11. [QS]ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, [QE]
12. [QS]ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು [QE]
13. [QS]ಯೆಹೋವನನ್ನು ಕೊಂಡಾಡಲಿ. [QE][QS]ಆತನ ನಾಮವೊಂದೇ ಮಹತ್ವವುಳ್ಳದ್ದು, [QE][QS]ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ. [QE]
14. [QS]ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. [QE][QS]ಆದುದರಿಂದ ಆತನ ಎಲ್ಲಾ ಭಕ್ತರು, [QE][QS]ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. [QE][QS]ಯೆಹೋವನಿಗೆ ಸ್ತೋತ್ರ! [QE]