ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; [QBR] ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. [QBR]
2. ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; [QBR] ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. [QBR]
3. ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; [QBR] ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. [QBR]
4. ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; [QBR] ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. [QBR]
5. ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; [QBR] ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. [QBR]
6. ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, [QBR] ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. [QBR]
7. ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; [QBR] ಅನ್ಯಜನಗಳನ್ನು ದಂಡಿಸುವರು; [QBR]
8. ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; [QBR] ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. [QBR]
9. ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; [QBR] ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. [QBR] ಯೆಹೋವನಿಗೆ ಸ್ತೋತ್ರ. [PE]

Notes

No Verse Added

Total 150 Chapters, Current Chapter 149 of Total Chapters 150
ಕೀರ್ತನೆಗಳು 149:11
1. ಯೆಹೋವನಿಗೆ ಸ್ತೋತ್ರ!
ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
2. ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;
ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
3. ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
4. ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;
ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
5. ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;
ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
6. ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,
ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
7. ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;
ಅನ್ಯಜನಗಳನ್ನು ದಂಡಿಸುವರು;
8. ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;
ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
9. ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;
ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
ಯೆಹೋವನಿಗೆ ಸ್ತೋತ್ರ. PE
Total 150 Chapters, Current Chapter 149 of Total Chapters 150
×

Alert

×

kannada Letters Keypad References