ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಜಯಗೀತೆ [BR]ಪ್ರಕ 19 } [QS]ಯೆಹೋವನಿಗೆ ಸ್ತೋತ್ರ! [QE][QS]ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; [QE][QS]ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. [QE]
2. [QS]ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; [QE][QS]ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. [QE]
3. [QS]ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; [QE][QS]ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. [QE]
4. [QS]ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; [QE][QS]ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. [QE]
5. [QS]ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; [QE][QS]ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. [QE]
6. [QS]ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, [QE][QS]ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. [QE]
7. [QS]ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; [QE][QS]ಅನ್ಯಜನಗಳನ್ನು ದಂಡಿಸುವರು; [QE]
8. [QS]ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; [QE][QS]ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. [QE]
9. [QS]ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; [QE][QS]ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. [QE][QS]ಯೆಹೋವನಿಗೆ ಸ್ತೋತ್ರ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
ಜಯಗೀತೆ
ಪ್ರಕ 19

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು; 8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. 9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
×

Alert

×

Kannada Letters Keypad References