ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು }[PS]*ದಾವೀದನ ಕಾವ್ಯ. *[PE][QS]ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. [QE]
2. [QS]ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; [QE][QS]ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. [QE]
3. [QS]ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, [QE][QS]“ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. [QE]
4. [QS]ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. [QE][QS]ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; [QE][QS]ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. [QE]
5. [QS]ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, [QE][QS]ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. [QE]
6. [QS]ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; [QE][QS]ಅದು ನನಗೆ ಸಂತೃಪ್ತಿಕರವಾಗಿದೆ. [QE]
7. [QS]ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; [QE][QS]ನಾನು ಆತನನ್ನು ಕೊಂಡಾಡುವೆನು. [QE][QS]ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. [QE]
8. [QS]ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; [QE][QS]ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. [QE]
9. [QS]ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; [QE][QS]ನನ್ನ ಮನವು ಉಲ್ಲಾಸಗೊಳ್ಳುತ್ತದೆ; [QE][QS]ನನ್ನ ಶರೀರವೂ ಸುರಕ್ಷಿತವಾಗಿರುವುದು. [QE]
10. [QS]ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; [QE][QS]ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. [QE]
11. [QS]ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; [QE][QS]ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; [QE][QS]ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು 3 ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2 ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. 4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. 5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 6 ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ. 7 ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. 10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. 11 ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
×

Alert

×

Kannada Letters Keypad References