ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. [QBR]
2. ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; [QBR] ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. [QBR]
3. ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, [QBR] “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. [QBR]
4. ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. [QBR] ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; [QBR] ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. [QBR]
5. ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, [QBR] ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. [QBR]
6. ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; [QBR] ಅದು ನನಗೆ ಸಂತೃಪ್ತಿಕರವಾಗಿದೆ. [QBR]
7. ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; [QBR] ನಾನು ಆತನನ್ನು ಕೊಂಡಾಡುವೆನು. [QBR] ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. [QBR]
8. ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; [QBR] ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. [QBR]
9. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; [QBR] ನನ್ನ ಮನವು ಉಲ್ಲಾಸಗೊಳ್ಳುತ್ತದೆ; [QBR] ನನ್ನ ಶರೀರವೂ ಸುರಕ್ಷಿತವಾಗಿರುವುದು. [QBR]
10. ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; [QBR] ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. [QBR]
11. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; [QBR] ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; [QBR] ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. [PE]

Notes

No Verse Added

Total 150 Chapters, Current Chapter 16 of Total Chapters 150
ಕೀರ್ತನೆಗಳು 16:5
1. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
2. ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು;
ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
3. ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,
“ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.
4. ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.
ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;
ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
5. ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,
ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
6. ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು;
ಅದು ನನಗೆ ಸಂತೃಪ್ತಿಕರವಾಗಿದೆ.
7. ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;
ನಾನು ಆತನನ್ನು ಕೊಂಡಾಡುವೆನು.
ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
8. ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
9. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;
ನನ್ನ ಮನವು ಉಲ್ಲಾಸಗೊಳ್ಳುತ್ತದೆ;
ನನ್ನ ಶರೀರವೂ ಸುರಕ್ಷಿತವಾಗಿರುವುದು.
10. ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;
ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
11. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. PE
Total 150 Chapters, Current Chapter 16 of Total Chapters 150
×

Alert

×

kannada Letters Keypad References