2. ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು;
ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. |
4. ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.
ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. |
7. ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;
ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. |
8. ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. |
10. ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;
ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. |
11. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. PE |