1. ಯೆಹೋವನೇ, ನ್ಯಾಯವಾದುದನ್ನು ಆಲೈಸು;
ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ. |
3. ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; * ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ. ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. |
11. ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;
ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. |
13. ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;
ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. |
14. ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು
ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. |
15. ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.
ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. PE |