3. {#3ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ }[PS]*ದಾವೀದನ ಪ್ರಾರ್ಥನೆ. *[PE][QS]ಯೆಹೋವನೇ, ನ್ಯಾಯವಾದುದನ್ನು ಆಲೈಸು; [QE][QS]ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; [QE][QS]ಅದು ಕಪಟವಾದ ಬಾಯಿಂದ ಬಂದದ್ದಲ್ಲ. [QE]
2. [QS]ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; [QE][QS]ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. [QE]
3. [QS]ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, [QE][QS]ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, [QE][QS]ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; [QE][QS][* ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ. ]ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. [QE]
4. [QS]ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ [QE][QS]ನಿನ್ನ ಮಾತನ್ನೇ ಅನುಸರಿಸಿದ್ದೇನೆ. [QE]
5. [QS]ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; [QE][QS]ನನ್ನ ಕಾಲು ಜಾರಲಿಲ್ಲ. [QE]
6. [QS]ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, [QE][QS]ಕಿವಿಗೊಟ್ಟು ಕೇಳು. [QE]
7. [QS]ಭುಜಬಲವನ್ನು ಪ್ರಯೋಗಿಸಿ, [QE][QS]ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, [QE][QS]ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು. [QE]
8. [QS]ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, [QE][QS]ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. [QE]
9. [QS]ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; [QE][QS]ಕಣ್ಣು ಗುಡ್ಡಿನಂತೆಯೇ ಕಾಪಾಡು. [QE]
10. [QS]ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; [QE][QS]ಅಹಂಕಾರದಿಂದ ಮಾತನಾಡುತ್ತಾರೆ. [QE]
11. [QS]ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; [QE][QS]ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. [QE]
12. [QS]ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, [QE][QS]ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. [QE]
13. [QS]ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; [QE][QS]ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. [QE]
14. [QS]ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು [QE][QS]ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; [QE][QS]ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. [QE][QS]ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. [QE]
15. [QS]ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. [QE][QS]ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. [QE]