ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನ್ಯಾಯವಾದುದನ್ನು ಆಲೈಸು; [QBR] ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; [QBR] ಅದು ಕಪಟವಾದ ಬಾಯಿಂದ ಬಂದದ್ದಲ್ಲ. [QBR]
2. ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; [QBR] ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. [QBR]
3. ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, [QBR] ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, [QBR] ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; [QBR] [* ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ.] ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. [QBR]
4. ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ [QBR] ನಿನ್ನ ಮಾತನ್ನೇ ಅನುಸರಿಸಿದ್ದೇನೆ. [QBR]
5. ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; [QBR] ನನ್ನ ಕಾಲು ಜಾರಲಿಲ್ಲ. [QBR]
6. ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, [QBR] ಕಿವಿಗೊಟ್ಟು ಕೇಳು. [QBR]
7. ಭುಜಬಲವನ್ನು ಪ್ರಯೋಗಿಸಿ, [QBR] ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, [QBR] ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು. [QBR]
8. ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, [QBR] ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. [QBR]
9. ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; [QBR] ಕಣ್ಣು ಗುಡ್ಡಿನಂತೆಯೇ ಕಾಪಾಡು. [QBR]
10. ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; [QBR] ಅಹಂಕಾರದಿಂದ ಮಾತನಾಡುತ್ತಾರೆ. [QBR]
11. ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; [QBR] ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. [QBR]
12. ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, [QBR] ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. [QBR]
13. ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; [QBR] ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. [QBR]
14. ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು [QBR] ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; [QBR] ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. [QBR] ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. [QBR]
15. ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. [QBR] ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 150
ಕೀರ್ತನೆಗಳು 17:83
1 ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ. 2 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. 3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; * ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ. ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. 4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ. 5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ. 6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು. 7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು. 8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. 9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು. 10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ. 11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. 12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. 13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. 14 ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. 15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 150
Common Bible Languages
West Indian Languages
×

Alert

×

kannada Letters Keypad References