3. {#3ಜಯಪ್ರದನಾದ ಯೆಹೋವನ ಸ್ತುತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. *[PE][QS]ನನ್ನ ಬಲವಾಗಿರುವ ಯೆಹೋವನೇ, [QE][QS]ನಿನ್ನಲ್ಲಿಯೇ ಮಮತೆಯಿಡುತ್ತೇನೆ. [QE]
2. [QS]ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, [QE][QS]ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, [QE][QS]ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. [QE]
3. [QS]ಯೆಹೋವನು ಸ್ತೋತ್ರಕ್ಕೆ ಅರ್ಹನು; [QE][QS]ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. [QE]
4. [QS]ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; [QE][QS]ನಾಶಪ್ರವಾಹವು ನನ್ನನ್ನು ನಡುಗಿಸಿತು. [QE]
5. [QS]ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; [QE][QS]ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. [QE]
6. [QS]ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; [QE][QS]ನನ್ನ ದೇವರನ್ನು ಪ್ರಾರ್ಥಿಸಿದೆನು. [QE][QS]ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; [QE][QS]ನನ್ನ ಕೂಗು ಆತನಿಗೆ ಕೇಳಿಸಿತು. [QE]
7. [QS]ಆಗ ಆತನಿಗೆ ಸಿಟ್ಟೇರಿದ್ದರಿಂದ, [QE][QS]ಭೂಮಿಯು ಗಡಗಡನೆ ಕಂಪಿಸಿತು, [QE][QS]ಪರ್ವತಗಳ ಬುಡಗಳು ನಡುಗಿ ಕದಲಿದವು. [QE]
8. [QS]ಆತನ ಮೂಗಿನಿಂದ ಹೊಗೆಯು ಎದ್ದು; [QE][QS]ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, [QE][QS]ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. [QE]
9. [QS]ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; [QE][QS]ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. [QE]
10. [QS]ಕೆರೂಬಿವಾಹನನಾಗಿ[* ಕೆರೂಬಿವಾಹನನಾಗಿ ಹಳೆಯ ಒಡಂಬಡಿಕೆಯಲ್ಲಿರುವ ಕೆರೂಬ್ (ಬಹುವಚನ “ಕೆರೂಬಿಮ್”) ರೆಕ್ಕೆಯುಳ್ಳ ಜೀವಿಯಾಗಿದ್ದು, ಯೆಹೋವನ ಸ್ವರ್ಗೀಯ ಸಿಂಹಾಸನವನ್ನು ಕಾಯುತ್ತಿದ್ದಾರೆ. ] ಹಾರಿ, [QE][QS]ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು. [QE]
11. [QS]ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, [QE][QS]ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು. [QE]
12. [QS]ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, [QE][QS]ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು. [QE]
13. [QS]ಯೆಹೋವನು ಆಕಾಶದಲ್ಲಿ ಗುಡುಗಿದನು; [QE][QS]ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು. [QE]
14. [QS]ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; [QE][QS]ಸಿಡಿಲುಗಳಿಂದ ಕಳವಳಗೊಳಿಸಿದನು. [QE]
15. [QS]ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, [QE][QS]ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. [QE][QS]ಭೂಮಂಡಲದ ಅಸ್ತಿವಾರಗಳು ಕಂಡುಬಂದವು. [QE]
16. [QS]ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, [QE][QS]ಮಹಾಜಲರಾಶಿಗಳೊಳಗಿಂದ ಎಳೆದನು. [QE]
17. [QS]ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ [QE][QS]ನನ್ನನ್ನು ಬಿಡಿಸಿ ರಕ್ಷಿಸಿದನು. [QE]
18. [QS]ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, [QE][QS]ಆಗ ಯೆಹೋವನು ನನಗೆ ಉದ್ಧಾರಕನಾದನು. [QE]
19. [QS]ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; [QE][QS]ನನ್ನನ್ನು ಮೆಚ್ಚಿ ರಕ್ಷಿಸಿದನು. [QE]
20. [QS]ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, [QE][QS]ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು. [QE]
21. [QS]ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; [QE][QS]ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ. [QE]
22. [QS]ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; [QE][QS]ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ. [QE]
23. [QS]ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; [QE][QS]ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. [QE]
24. [QS]ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, [QE][QS]ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು. [QE]
25. [QS]ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, [QE][QS]ದೋಷವಿಲ್ಲದವನಿಗೆ ನಿರ್ದೋಷಿಯೂ, [QE]
26. [QS]ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ. [QE]
27. [QS]ದೀನರನ್ನು ಉದ್ಧರಿಸುವವನೂ, [QE][QS]ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ? [QE]
28. [QS]ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; [QE][QS]ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು. [QE]
29. [QS]ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; [QE][QS]ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು[† ಗೋಡೆಯನ್ನು ಹಾರುವೆನು ಅಥವಾ ಗೋಡೆಯನ್ನು ತುಳಿದುಹಾಕುವೆನು. ]. [QE]
30. [QS]ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; [QE][QS]ಯೆಹೋವನ ವಚನವು ಶುದ್ಧವಾದದ್ದು. [QE][QS]ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. [QE]
31. [QS]ಯೆಹೋವನಲ್ಲದೆ ದೇವರು ಯಾರು? [QE][QS]ನಮ್ಮ ದೇವರ ಹೊರತು ಶರಣನು ಎಲ್ಲಿ? [QE]
32. [QS]ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, [QE][QS]ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. [QE]
33. [QS]ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; [QE][QS]ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. [QE]
34. [QS]ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ [QE][QS]ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. [QE]
35. [QS]ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. [QE][QS]ನಿನ್ನ ಬಲಗೈ ನನಗೆ ಆಧಾರ; [QE][QS]ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ. [QE]
36. [QS]ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ [QE][QS]ನನ್ನ ಪಾದಗಳು ಕದಲುವುದಿಲ್ಲ. [QE]
37. [QS]ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; [QE][QS]ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. [QE]
38. [QS]ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; [QE][QS]ನನ್ನ ಪಾದದ ಕೆಳಗೆ ಬೀಳುವರು. [QE]
39. [QS]ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; [QE][QS]ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ. [QE]
40. [QS]ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; [QE][QS]ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು. [QE]
41. [QS]ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; [QE][QS]ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. [QE]
42. [QS]ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ [QE][QS]ಅವರನ್ನು ಪುಡಿಪುಡಿಮಾಡಿದೆನು. [QE][QS]ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು. [QE]
43. [QS]ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; [QE][QS]ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. [QE]
44. [QS]ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; [QE][QS]ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು. [QE]
45. [QS]ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. [QE]
46. [QS]ಯೆಹೋವನು ಚೈತನ್ಯಸ್ವರೂಪನು; [QE][QS]ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ. [QE]
47. [QS]ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; [QE][QS]ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. [QE]
48. [QS]ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, [QE][QS]ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; [QE][QS]ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ. [QE]
49. [QS]ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; [QE][QS]ನಿನ್ನ ನಾಮವನ್ನು ಸಂಕೀರ್ತಿಸುವೆನು. [QE]
50. [QS]ಆತನು ತಾನು ನೇಮಿಸಿದ ಅರಸನಿಗೋಸ್ಕರ [QE][QS]ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; [QE][QS]ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ [QE][QS]ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. [QE]