1. ನನ್ನ ಬಲವಾಗಿರುವ ಯೆಹೋವನೇ, [QBR] ನಿನ್ನಲ್ಲಿಯೇ ಮಮತೆಯಿಡುತ್ತೇನೆ. [QBR]
2. ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, [QBR] ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, [QBR] ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. [QBR]
3. ಯೆಹೋವನು ಸ್ತೋತ್ರಕ್ಕೆ ಅರ್ಹನು; [QBR] ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. [QBR]
4. ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; [QBR] ನಾಶಪ್ರವಾಹವು ನನ್ನನ್ನು ನಡುಗಿಸಿತು. [QBR]
5. ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; [QBR] ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. [QBR]
6. ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; [QBR] ನನ್ನ ದೇವರನ್ನು ಪ್ರಾರ್ಥಿಸಿದೆನು. [QBR] ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; [QBR] ನನ್ನ ಕೂಗು ಆತನಿಗೆ ಕೇಳಿಸಿತು. [QBR]
7. ಆಗ ಆತನಿಗೆ ಸಿಟ್ಟೇರಿದ್ದರಿಂದ, [QBR] ಭೂಮಿಯು ಗಡಗಡನೆ ಕಂಪಿಸಿತು, [QBR] ಪರ್ವತಗಳ ಬುಡಗಳು ನಡುಗಿ ಕದಲಿದವು. [QBR]
8. ಆತನ ಮೂಗಿನಿಂದ ಹೊಗೆಯು ಎದ್ದು; [QBR] ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, [QBR] ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. [QBR]
9. ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; [QBR] ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. [QBR]
10. ಕೆರೂಬಿವಾಹನನಾಗಿ [* ಕೆರೂಬಿವಾಹನನಾಗಿ ಹಳೆಯ ಒಡಂಬಡಿಕೆಯಲ್ಲಿರುವ ಕೆರೂಬ್ (ಬಹುವಚನ “ಕೆರೂಬಿಮ್”) ರೆಕ್ಕೆಯುಳ್ಳ ಜೀವಿಯಾಗಿದ್ದು, ಯೆಹೋವನ ಸ್ವರ್ಗೀಯ ಸಿಂಹಾಸನವನ್ನು ಕಾಯುತ್ತಿದ್ದಾರೆ.] ಹಾರಿ, [QBR] ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು. [QBR]
11. ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, [QBR] ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು. [QBR]
12. ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, [QBR] ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು. [QBR]
13. ಯೆಹೋವನು ಆಕಾಶದಲ್ಲಿ ಗುಡುಗಿದನು; [QBR] ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು. [QBR]
14. ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; [QBR] ಸಿಡಿಲುಗಳಿಂದ ಕಳವಳಗೊಳಿಸಿದನು. [QBR]
15. ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, [QBR] ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. [QBR] ಭೂಮಂಡಲದ ಅಸ್ತಿವಾರಗಳು ಕಂಡುಬಂದವು. [QBR]
16. ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, [QBR] ಮಹಾಜಲರಾಶಿಗಳೊಳಗಿಂದ ಎಳೆದನು. [QBR]
17. ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ [QBR] ನನ್ನನ್ನು ಬಿಡಿಸಿ ರಕ್ಷಿಸಿದನು. [QBR]
18. ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, [QBR] ಆಗ ಯೆಹೋವನು ನನಗೆ ಉದ್ಧಾರಕನಾದನು. [QBR]
19. ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; [QBR] ನನ್ನನ್ನು ಮೆಚ್ಚಿ ರಕ್ಷಿಸಿದನು. [QBR]
20. ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, [QBR] ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು. [QBR]
21. ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; [QBR] ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ. [QBR]
22. ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; [QBR] ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ. [QBR]
23. ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; [QBR] ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. [QBR]
24. ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, [QBR] ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು. [QBR]
25. ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, [QBR] ದೋಷವಿಲ್ಲದವನಿಗೆ ನಿರ್ದೋಷಿಯೂ, [QBR]
26. ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ. [QBR]
27. ದೀನರನ್ನು ಉದ್ಧರಿಸುವವನೂ, [QBR] ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ? [QBR]
28. ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; [QBR] ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು. [QBR]
29. ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; [QBR] ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು [† ಗೋಡೆಯನ್ನು ಹಾರುವೆನು ಅಥವಾ ಗೋಡೆಯನ್ನು ತುಳಿದುಹಾಕುವೆನು.] . [QBR]
30. ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; [QBR] ಯೆಹೋವನ ವಚನವು ಶುದ್ಧವಾದದ್ದು. [QBR] ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. [QBR]
31. ಯೆಹೋವನಲ್ಲದೆ ದೇವರು ಯಾರು? [QBR] ನಮ್ಮ ದೇವರ ಹೊರತು ಶರಣನು ಎಲ್ಲಿ? [QBR]
32. ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, [QBR] ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. [QBR]
33. ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; [QBR] ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. [QBR]
34. ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ [QBR] ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. [QBR]
35. ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. [QBR] ನಿನ್ನ ಬಲಗೈ ನನಗೆ ಆಧಾರ; [QBR] ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ. [QBR]
36. ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ [QBR] ನನ್ನ ಪಾದಗಳು ಕದಲುವುದಿಲ್ಲ. [QBR]
37. ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; [QBR] ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. [QBR]
38. ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; [QBR] ನನ್ನ ಪಾದದ ಕೆಳಗೆ ಬೀಳುವರು. [QBR]
39. ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; [QBR] ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ. [QBR]
40. ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; [QBR] ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು. [QBR]
41. ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; [QBR] ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. [QBR]
42. ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ [QBR] ಅವರನ್ನು ಪುಡಿಪುಡಿಮಾಡಿದೆನು. [QBR] ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು. [QBR]
43. ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; [QBR] ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. [QBR]
44. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; [QBR] ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು. [QBR]
45. ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. [QBR]
46. ಯೆಹೋವನು ಚೈತನ್ಯಸ್ವರೂಪನು; [QBR] ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ. [QBR]
47. ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; [QBR] ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. [QBR]
48. ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, [QBR] ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; [QBR] ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ. [QBR]
49. ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; [QBR] ನಿನ್ನ ನಾಮವನ್ನು ಸಂಕೀರ್ತಿಸುವೆನು. [QBR]
50. ಆತನು ತಾನು ನೇಮಿಸಿದ ಅರಸನಿಗೋಸ್ಕರ [QBR] ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; [QBR] ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ [QBR] ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. [PE]