4. ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;
ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. |
5. ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ. |
7. ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. |
8. ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;
ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. |
9. ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ.
ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. |
10. ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು.
ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. |
13. ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು.
ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ. |
14. ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ,
ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ. PE |