ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಅರಸನ ಜಯಕ್ಕಾಗಿ ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *[PE][QS]ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; [QE][QS]ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. [QE]
2. [QS]ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; [QE][QS]ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. [QE]
3. [QS]ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; [QE][QS]ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. [QE][QSS]ಸೆಲಾ [QSE]
4. [QS]ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; [QE][QS]ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. [QE]
5. [QS]ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; [QE][QS]ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. [QE][QS]ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. [QE]
6. [QS]ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ [QE][QS]ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. [QE][QS]ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, [QE][QS]ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. [QE]
7. [QS]ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; [QE][QS]ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. [QE]
8. [QS]ಅವರು ಬಿದ್ದುಹೋಗಿದ್ದಾರೆ; [QE][QS]ನಾವಾದರೋ ಎದ್ದು ನಿಂತಿದ್ದೇವೆ. [QE]
9. [QS]ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; [QE][QS]ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
ಅರಸನ ಜಯಕ್ಕಾಗಿ ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. 2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. 3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. QSS ಸೆಲಾ SE 4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. 5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. 6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. 7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. 8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. 9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
×

Alert

×

Kannada Letters Keypad References