ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; [QBR] ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. [QBR]
2. ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; [QBR] ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. [QBR]
3. ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; [QBR] ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ
4. ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; [QBR] ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. [QBR]
5. ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; [QBR] ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. [QBR] ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. [QBR]
6. ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ [QBR] ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. [QBR] ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, [QBR] ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. [QBR]
7. ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; [QBR] ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. [QBR]
8. ಅವರು ಬಿದ್ದುಹೋಗಿದ್ದಾರೆ; [QBR] ನಾವಾದರೋ ಎದ್ದು ನಿಂತಿದ್ದೇವೆ. [QBR]
9. ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; [QBR] ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. [PE]

Notes

No Verse Added

Total 150 Chapters, Current Chapter 20 of Total Chapters 150
ಕೀರ್ತನೆಗಳು 20:3
1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;
ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
2. ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;
ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
3. ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;
ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ
4. ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;
ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
5. ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;
ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು.
ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
6. ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ
ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು.
ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು,
ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
7. ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;
ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
8. ಅವರು ಬಿದ್ದುಹೋಗಿದ್ದಾರೆ;
ನಾವಾದರೋ ಎದ್ದು ನಿಂತಿದ್ದೇವೆ.
9. ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;
ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. PE
Total 150 Chapters, Current Chapter 20 of Total Chapters 150
×

Alert

×

kannada Letters Keypad References