ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; [QBR] ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. [QBR]
2. ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; [QBR] ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. [QBR]
3. ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; [QBR] ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ
4. ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; [QBR] ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. [QBR]
5. ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; [QBR] ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. [QBR] ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. [QBR]
6. ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ [QBR] ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. [QBR] ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, [QBR] ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. [QBR]
7. ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; [QBR] ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. [QBR]
8. ಅವರು ಬಿದ್ದುಹೋಗಿದ್ದಾರೆ; [QBR] ನಾವಾದರೋ ಎದ್ದು ನಿಂತಿದ್ದೇವೆ. [QBR]
9. ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; [QBR] ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
ಕೀರ್ತನೆಗಳು 20:87
1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. 2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. 3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ 4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. 5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. 6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. 7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. 8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. 9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
Common Bible Languages
West Indian Languages
×

Alert

×

kannada Letters Keypad References