1. {#3ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ } [QS][PS]*(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) [BR]ಕೀರ್ತ 69; 71; 102; ಯೆಶಾ 55 *[PE]ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? [QE][QS]ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ? [QE]
2. [QS]ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; [QE][QS]ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. [QE]
3. [QS]ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, [QE][QS]ನೀನು ಪವಿತ್ರಸ್ವರೂಪನು. [QE]
4. [QS]ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; [QE][QS]ನಿನ್ನನ್ನು ನಂಬಿ ಉದ್ಧಾರವಾದರು. [QE]
5. [QS]ನಿನಗೆ ಮೊರೆಯಿಟ್ಟು ವಿಮುಕ್ತರಾದರು; [QE][QS]ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. [QE]
6. [QS]ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; [QE][QS]ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. [QE]
7. [QS]ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; [QE][QS]ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ, [QE]
8. [QS]“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; [QE][QS]ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ. [QE]
9. [QS]ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. [QE][QS]ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. [QE]
10. [QS]ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; [QE][QS]ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. [QE]
11. [QS]ನನಗೀಗ ಕಷ್ಟವು ಪ್ರಾಪ್ತವಾಗಿದೆ; [QE][QS]ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ. [QE]
12. [QS]ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; [QE][QS]ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ. [QE]
13. [QS]ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. [QE]
14. [QS]ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; [QE][QS]ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. [QE][QS]ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. [QE]
15. [QS] [* ಅಥವಾ ಗಂಟಲು. ]ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; [QE][QS]ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. [QE][QS]ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. [QE]
16. [QS]ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; [QE][QS]ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. [QE][QS]ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. [QE]
17. [QS]ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; [QE][QS]ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. [QE]
18. [QS]ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; [QE][QS]ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ. [QE]
19. [QS]ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; [QE][QS]ಬೇಗ ಬಂದು ಸಹಾಯಮಾಡು. [QE]
20. [QS]ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; [QE][QS]ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. [QE]
21. [QS]ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು [† ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ]ತಪ್ಪಿಸು. [QE]
22. [QS]ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; [QE][QS]ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. [QE]
23. [QS]ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; [QE][QS]ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. [QE][QS]ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. [QE]
24. [QS]ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, [QE][QS]ಅದಕ್ಕೆ ಅಸಹ್ಯಪಡಲಿಲ್ಲ; [QE][QS]ತನ್ನ ಮುಖವನ್ನು ಅವನಿಗೆ ಮರೆಮಾಡದೆ, [QE][QS]ಅವನ ಪ್ರಾರ್ಥನೆಗೆ ಕಿವಿಗೊಟ್ಟನು. [QE]
25. [QS]ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; [QE][QS]ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. [QE]
26. [QS]ದೀನರು ಉಂಡು ತೃಪ್ತರಾಗುವರು; [QE][QS]ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. [QE][QS][‡ ಅಥವಾ ನಿಮ್ಮ. ]ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. [QE]
27. [QS]ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [QE][QS]ಯೆಹೋವನೇ, ಎಲ್ಲಾ ಜನಾಂಗಗಳವರು [§ ಅಥವಾ ಆತನಿಗೆ. ]ನಿನಗೆ ಅಡ್ಡಬೀಳುವರು. [QE]
28. [QS]ರಾಜ್ಯವು ಯೆಹೋವನದೇ; [QE][QS]ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. [QE]
29. [QS]ಭೂಲೋಕದಲ್ಲಿರುವ ಪುಷ್ಟರೆಲ್ಲರೂ [* ಅಥವಾ ಉಂಡು ಆರಾಧಿಸುವರು. ]ಆರಾಧಿಸುವರು; [QE][QS]ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. [QE]
30. [QS]ಆತನನ್ನು ಸೇವಿಸುವವರ ಸಂತಾನದವರು [QE][QS]ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. [QE]
31. [QS]ಅವರು ಬಂದು ಆತನ ನೀತಿಯನ್ನೂ, [QE][QS]ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು. [QE]