1. ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? [QBR] ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ? [QBR]
2. ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; [QBR] ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. [QBR]
3. ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, [QBR] ನೀನು ಪವಿತ್ರಸ್ವರೂಪನು. [QBR]
4. ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; [QBR] ನಿನ್ನನ್ನು ನಂಬಿ ಉದ್ಧಾರವಾದರು. [QBR]
5. ನಿನಗೆ ಮೊರೆಯಿಟ್ಟು ವಿಮುಕ್ತರಾದರು; [QBR] ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. [QBR]
6. ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; [QBR] ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. [QBR]
7. ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; [QBR] ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ, [QBR]
8. “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; [QBR] ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ. [QBR]
9. ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. [QBR] ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. [QBR]
10. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; [QBR] ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. [QBR]
11. ನನಗೀಗ ಕಷ್ಟವು ಪ್ರಾಪ್ತವಾಗಿದೆ; [QBR] ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ. [QBR]
12. ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; [QBR] ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ. [QBR]
13. ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. [QBR]
14. ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; [QBR] ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. [QBR] ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. [QBR]
15. [* ಅಥವಾ ಗಂಟಲು.] ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; [QBR] ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. [QBR] ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. [QBR]
16. ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; [QBR] ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. [QBR] ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. [QBR]
17. ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; [QBR] ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. [QBR]
18. ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; [QBR] ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ. [QBR]
19. ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; [QBR] ಬೇಗ ಬಂದು ಸಹಾಯಮಾಡು. [QBR]
20. ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; [QBR] ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. [QBR]
21. ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು [† ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ] ತಪ್ಪಿಸು. [QBR]
22. ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; [QBR] ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. [QBR]
23. ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; [QBR] ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. [QBR] ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. [QBR]
24. ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, [QBR] ಅದಕ್ಕೆ ಅಸಹ್ಯಪಡಲಿಲ್ಲ; [QBR] ತನ್ನ ಮುಖವನ್ನು ಅವನಿಗೆ ಮರೆಮಾಡದೆ, [QBR] ಅವನ ಪ್ರಾರ್ಥನೆಗೆ ಕಿವಿಗೊಟ್ಟನು. [QBR]
25. ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; [QBR] ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. [QBR]
26. ದೀನರು ಉಂಡು ತೃಪ್ತರಾಗುವರು; [QBR] ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. [QBR] [‡ ಅಥವಾ ನಿಮ್ಮ.] ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. [QBR]
27. ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [QBR] ಯೆಹೋವನೇ, ಎಲ್ಲಾ ಜನಾಂಗಗಳವರು [§ ಅಥವಾ ಆತನಿಗೆ.] ನಿನಗೆ ಅಡ್ಡಬೀಳುವರು. [QBR]
28. ರಾಜ್ಯವು ಯೆಹೋವನದೇ; [QBR] ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. [QBR]
29. ಭೂಲೋಕದಲ್ಲಿರುವ ಪುಷ್ಟರೆಲ್ಲರೂ [* ಅಥವಾ ಉಂಡು ಆರಾಧಿಸುವರು.] ಆರಾಧಿಸುವರು; [QBR] ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. [QBR]
30. ಆತನನ್ನು ಸೇವಿಸುವವರ ಸಂತಾನದವರು [QBR] ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. [QBR]
31. ಅವರು ಬಂದು ಆತನ ನೀತಿಯನ್ನೂ, [QBR] ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು. [PE]