ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; [QBR] ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. [QBR]
2. ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; [QBR] ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. [QBR]
3. ಯೆಹೋವನ ಪರ್ವತವನ್ನು [* ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ.] ಹತ್ತತಕ್ಕವನು ಯಾರು? [QBR] ಆತನ ಪವಿತ್ರಸ್ಥಾನದಲ್ಲಿ [† ಅಥವಾ ನಿಲ್ಲುವುದಕ್ಕೆ.] ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? [QBR]
4. ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, [QBR] ಮೋಸ ಪ್ರಮಾಣಮಾಡದೆ, [QBR] ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, [QBR]
5. ಅವನೇ ಯೆಹೋವನಿಂದ ಶುಭವನ್ನು ಹೊಂದುವನು; [QBR] ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. [QBR]
6. ಇಂಥವರೇ ಆತನ ದರ್ಶನವನ್ನು ಬಯಸುವವರು. [QBR] ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ
7. ದ್ವಾರಗಳೇ, ಉನ್ನತವಾಗಿರ್ರಿ! [QBR] ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! [QBR] ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. [QBR]
8. ಮಹಾಮಹಿಮೆಯುಳ್ಳ ಈ ಅರಸನು ಯಾರು? [QBR] ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, [QBR] ಯುದ್ಧವೀರನಾಗಿರುವ ಯೆಹೋವ. [QBR]
9. ದ್ವಾರಗಳೇ, ಉನ್ನತವಾಗಿರ್ರಿ! [QBR] ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! [QBR] ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. [QBR]
10. ಮಹಾಮಹಿಮೆಯುಳ್ಳ ಈ ಅರಸನು ಯಾರು? [QBR] ಸೇನಾಧೀಶ್ವರನಾದ ಯೆಹೋವನೇ, [QBR] ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
ಕೀರ್ತನೆಗಳು 24:77
1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3 ಯೆಹೋವನ ಪರ್ವತವನ್ನು * ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ. ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಅಥವಾ ನಿಲ್ಲುವುದಕ್ಕೆ. ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ 7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. 9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
Common Bible Languages
West Indian Languages
×

Alert

×

kannada Letters Keypad References