1. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QBR]
2. ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, [QBR] ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. [QBR] ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. [QBR]
3. ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, [QBR] ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. [QBR]
4. ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; [QBR] ನೀನು ಒಪ್ಪುವ ದಾರಿಯನ್ನು ತೋರಿಸು. [QBR]
5. ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; [QBR] ನೀನೇ ನನ್ನನ್ನು ರಕ್ಷಿಸುವ ದೇವರು; [QBR] ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. [QBR]
6. ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, [QBR] ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. [QBR]
7. ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, [QBR] ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. [QBR]
8. ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; [QBR] ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. [QBR]
9. ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; [QBR] ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. [QBR]
10. ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, [QBR] ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. [QBR]
11. ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; [QBR] ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. [QBR]
12. ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ [QBR] ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. [QBR]
13. ಅವರು ಸುಖದಿಂದಲೇ ಇರುವರು; [QBR] ಅವರ ಸಂತತಿಯವರು ದೇಶವನ್ನು ಅನುಭವಿಸುವರು. [QBR]
14. ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; [QBR] ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. [QBR]
15. ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; [QBR] ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. [QBR]
16. ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; [QBR] ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. [QBR]
17. ನನ್ನ ಮನೋವ್ಯಥೆಗಳನ್ನು ನಿವಾರಿಸು; [QBR] ಸಂಕಟಗಳಿಂದ ನನ್ನನ್ನು ಬಿಡಿಸು. [QBR]
18. ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, [QBR] ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. [QBR]
19. ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; [QBR] ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. [QBR]
20. ನನ್ನ ಪ್ರಾಣವನ್ನು ಕಾಪಾಡಿ ಉಳಿಸು; [QBR] ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. [QBR]
21. ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QBR] ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. [QBR]
22. ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. [PE]