ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ }[PS]*ದಾವೀದನ ಕೀರ್ತನೆ. *[PE][QS]ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QE]
2. [QS]ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, [QE][QS]ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. [QE][QS]ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. [QE]
3. [QS]ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, [QE][QS]ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. [QE]
4. [QS]ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; [QE][QS]ನೀನು ಒಪ್ಪುವ ದಾರಿಯನ್ನು ತೋರಿಸು. [QE]
5. [QS]ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; [QE][QS]ನೀನೇ ನನ್ನನ್ನು ರಕ್ಷಿಸುವ ದೇವರು; [QE][QS]ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. [QE]
6. [QS]ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, [QE][QS]ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. [QE]
7. [QS]ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, [QE][QS]ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. [QE]
8. [QS]ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; [QE][QS]ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. [QE]
9. [QS]ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; [QE][QS]ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. [QE]
10. [QS]ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, [QE][QS]ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. [QE]
11. [QS]ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; [QE][QS]ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. [QE]
12. [QS]ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ [QE][QS]ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. [QE]
13. [QS]ಅವರು ಸುಖದಿಂದಲೇ ಇರುವರು; [QE][QS]ಅವರ ಸಂತತಿಯವರು ದೇಶವನ್ನು ಅನುಭವಿಸುವರು. [QE]
14. [QS]ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; [QE][QS]ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. [QE]
15. [QS]ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; [QE][QS]ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. [QE]
16. [QS]ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; [QE][QS]ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. [QE]
17. [QS]ನನ್ನ ಮನೋವ್ಯಥೆಗಳನ್ನು ನಿವಾರಿಸು; [QE][QS]ಸಂಕಟಗಳಿಂದ ನನ್ನನ್ನು ಬಿಡಿಸು. [QE]
18. [QS]ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, [QE][QS]ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. [QE]
19. [QS]ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; [QE][QS]ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. [QE]
20. [QS]ನನ್ನ ಪ್ರಾಣವನ್ನು ಕಾಪಾಡಿ ಉಳಿಸು; [QE][QS]ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. [QE]
21. [QS]ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QE][QS]ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. [QE]
22. [QS]ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 150
ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ 3 ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. 2 ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. 3 ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. 4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. 7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. 8 ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. 10 ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. 11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. 12 ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. 13 ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು. 14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. 15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. 16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. 17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. 18 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. 19 ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. 20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. 21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. 22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 150
×

Alert

×

Kannada Letters Keypad References