ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. [QBR] ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. [QBR] ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. [QBR]
2. ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; [QBR] ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. [QBR]
3. ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; [QBR] ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. [QBR]
4. ನಾನು ಮೋಸಗಾರರ ಸಹವಾಸ ಮಾಡುವವನಲ್ಲ; [QBR] ಕಪಟಿಗಳನ್ನು ಸೇರುವವನಲ್ಲ. [QBR]
5. ನನಗೆ ದುರ್ಜನರ ಕೂಟವು ಅಸಹ್ಯ; [QBR] ದುಷ್ಟರ ಸಂಗವು ಬೇಕಿಲ್ಲ. [QBR]
6. ಯೆಹೋವನೇ, ನಾನು ನಿರ್ದೋಷಿ ಎಂದು, [QBR] ಕೈಗಳನ್ನು ತೊಳೆದುಕೊಂಡವನಾಗಿ, [QBR]
7. ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, [QBR] ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. [QBR]
8. ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; [QBR] ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. [QBR]
9. ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; [QBR] ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. [QBR]
10. ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; [QBR] ಅವರ ಬಲಗೈ ಲಂಚದಿಂದ ತುಂಬಿದೆ. [QBR]
11. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; [QBR] ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. [QBR]
12. ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; [QBR] ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. [PE]

Notes

No Verse Added

Total 150 Chapters, Current Chapter 26 of Total Chapters 150
ಕೀರ್ತನೆಗಳು 26:150
1. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.
ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ.
ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
2. ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;
ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3. ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;
ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4. ನಾನು ಮೋಸಗಾರರ ಸಹವಾಸ ಮಾಡುವವನಲ್ಲ;
ಕಪಟಿಗಳನ್ನು ಸೇರುವವನಲ್ಲ.
5. ನನಗೆ ದುರ್ಜನರ ಕೂಟವು ಅಸಹ್ಯ;
ದುಷ್ಟರ ಸಂಗವು ಬೇಕಿಲ್ಲ.
6. ಯೆಹೋವನೇ, ನಾನು ನಿರ್ದೋಷಿ ಎಂದು,
ಕೈಗಳನ್ನು ತೊಳೆದುಕೊಂಡವನಾಗಿ,
7. ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,
ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8. ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ;
ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9. ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ;
ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10. ಅವರ ಕೈಗಳು ಬಲಾತ್ಕಾರ ನಡೆಸುತ್ತವೆ;
ಅವರ ಬಲಗೈ ಲಂಚದಿಂದ ತುಂಬಿದೆ.
11. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು;
ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
12. ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ;
ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. PE
Total 150 Chapters, Current Chapter 26 of Total Chapters 150
×

Alert

×

kannada Letters Keypad References