ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ }[PS]*ದಾವೀದನ ಕೀರ್ತನೆ. *[PE][QS]ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. [QE][QS]ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. [QE][QS]ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. [QE]
2. [QS]ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; [QE][QS]ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. [QE]
3. [QS]ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; [QE][QS]ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. [QE]
4. [QS]ನಾನು ಮೋಸಗಾರರ ಸಹವಾಸ ಮಾಡುವವನಲ್ಲ; [QE][QS]ಕಪಟಿಗಳನ್ನು ಸೇರುವವನಲ್ಲ. [QE]
5. [QS]ನನಗೆ ದುರ್ಜನರ ಕೂಟವು ಅಸಹ್ಯ; [QE][QS]ದುಷ್ಟರ ಸಂಗವು ಬೇಕಿಲ್ಲ. [QE]
6. [QS]ಯೆಹೋವನೇ, ನಾನು ನಿರ್ದೋಷಿ ಎಂದು, [QE][QS]ಕೈಗಳನ್ನು ತೊಳೆದುಕೊಂಡವನಾಗಿ, [QE]
7. [QS]ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, [QE][QS]ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. [QE]
8. [QS]ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; [QE][QS]ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. [QE]
9. [QS]ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; [QE][QS]ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. [QE]
10. [QS]ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; [QE][QS]ಅವರ ಬಲಗೈ ಲಂಚದಿಂದ ತುಂಬಿದೆ. [QE]
11. [QS]ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; [QE][QS]ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. [QE]
12. [QS]ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; [QE][QS]ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 150
ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ 3 ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. 2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. 3 ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. 4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. 5 ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ. 6 ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ, 7 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. 8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. 9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. 10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ. 11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. 12 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 150
×

Alert

×

Kannada Letters Keypad References