1. {ಗಂಡಾಂತರದಲ್ಲಿ ಭಕ್ತನ ನಂಬಿಕೆ} PS ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? |
3. ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;
ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. |
4. ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. |
5. ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. |
6. ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,
ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. |
8. “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ,
ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. |
9. ನನಗೆ ವಿಮುಖನಾಗಿರಬೇಡ;
ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. |
11. ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. |
14. ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು. PE |