ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ಗಂಡಾಂತರದಲ್ಲಿ ಭಕ್ತನ ನಂಬಿಕೆ} [PS] ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; [QBR] ನಾನು ಯಾರಿಗೆ ಭಯಪಟ್ಟೆನು? [QBR] ಯೆಹೋವನು ನನ್ನ ಪ್ರಾಣದ ಆಧಾರವು; [QBR] ನಾನು ಯಾರಿಗೆ ಹೆದರೇನು? [QBR]
2. ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು [QBR] ನನ್ನನ್ನು ನುಂಗಿಬಿಡಬೇಕೆಂದು ಬಂದು, [QBR] ತಾವೇ ನೆಲಕ್ಕೆ ಬಿದ್ದುಹೋದರು. [QBR]
3. ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; [QBR] ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, [QBR] ಭರವಸವುಳ್ಳವನಾಗಿಯೇ ಇರುವೆನು. [QBR]
4. ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, [QBR] ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, [QBR] ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ [QBR] ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು [QBR] ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. [QBR]
5. ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; [QBR] ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; [QBR] ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. [QBR]
6. ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, [QBR] ನನ್ನ ತಲೆ ಎತ್ತಲ್ಪಟ್ಟಿರುವುದು; [QBR] ನಾನು ಯೆಹೋವನ ಗುಡಾರದಲ್ಲಿ, [QBR] ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. [QBR] ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. [QBR]
7. ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; [QBR] ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. [QBR]
8. “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, [QBR] ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. [QBR]
9. ನನಗೆ ವಿಮುಖನಾಗಿರಬೇಡ; [QBR] ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. [QBR] ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; [QBR] ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. [QBR]
10. ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; [QBR] ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. [QBR]
11. ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; [QBR] ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. [QBR]
12. ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QBR] ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. [QBR]
13. ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು [QBR] ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. [QBR]
14. ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; [QBR] ನಿನ್ನ ಹೃದಯವು ಧೈರ್ಯದಿಂದಿರಲಿ; [QBR] ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
ಕೀರ್ತನೆಗಳು 27:51
ಗಂಡಾಂತರದಲ್ಲಿ ಭಕ್ತನ ನಂಬಿಕೆ 1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. 12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
Common Bible Languages
West Indian Languages
×

Alert

×

kannada Letters Keypad References