ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#1ಗಂಡಾಂತರದಲ್ಲಿ ಭಕ್ತನ ನಂಬಿಕೆ }[PS]*ದಾವೀದನ ಕೀರ್ತನೆ. *[PE][QS]ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; [QE][QS]ನಾನು ಯಾರಿಗೆ ಭಯಪಟ್ಟೆನು? [QE][QS]ಯೆಹೋವನು ನನ್ನ ಪ್ರಾಣದ ಆಧಾರವು; [QE][QS]ನಾನು ಯಾರಿಗೆ ಹೆದರೇನು? [QE]
2. [QS]ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು [QE][QS]ನನ್ನನ್ನು ನುಂಗಿಬಿಡಬೇಕೆಂದು ಬಂದು, [QE][QS]ತಾವೇ ನೆಲಕ್ಕೆ ಬಿದ್ದುಹೋದರು. [QE]
3. [QS]ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; [QE][QS]ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, [QE][QS]ಭರವಸವುಳ್ಳವನಾಗಿಯೇ ಇರುವೆನು. [QE]
4. [QS]ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, [QE][QS]ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, [QE][QS]ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ [QE][QS]ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು [QE][QS]ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. [QE]
5. [QS]ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; [QE][QS]ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; [QE][QS]ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. [QE]
6. [QS]ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, [QE][QS]ನನ್ನ ತಲೆ ಎತ್ತಲ್ಪಟ್ಟಿರುವುದು; [QE][QS]ನಾನು ಯೆಹೋವನ ಗುಡಾರದಲ್ಲಿ, [QE][QS]ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. [QE][QS]ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. [QE]
7. [QS]ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; [QE][QS]ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. [QE]
8. [QS]“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, [QE][QS]ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. [QE]
9. [QS]ನನಗೆ ವಿಮುಖನಾಗಿರಬೇಡ; [QE][QS]ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. [QE][QS]ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; [QE][QS]ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. [QE]
10. [QS]ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; [QE][QS]ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. [QE]
11. [QS]ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; [QE][QS]ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. [QE]
12. [QS]ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QE][QS]ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. [QE]
13. [QS]ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು [QE][QS]ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. [QE]
14. [QS]ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; [QE][QS]ನಿನ್ನ ಹೃದಯವು ಧೈರ್ಯದಿಂದಿರಲಿ; [QE][QS]ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
ಗಂಡಾಂತರದಲ್ಲಿ ಭಕ್ತನ ನಂಬಿಕೆ 1 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. 12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 150
×

Alert

×

Kannada Letters Keypad References