ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. {ಭಕ್ತನ ಸ್ತುತಿ} [PS] ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; [QBR] ಕೇಳದೆ ಇರಬೇಡ. [QBR] ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. [QBR]
2. ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ [QBR] ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; [QBR] ನನ್ನ ವಿಜ್ಞಾಪನೆಯನ್ನು ಲಾಲಿಸು. [QBR]
3. ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ [QBR] ನನ್ನನ್ನೂ ಎಳೆದುಕೊಂಡು ಹೋಗಬೇಡ. [QBR] ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, [QBR] ಒಳಗೆ ಕೇಡಾಗಲಿ ಎಂದು ಯೋಚಿಸುವವರು. [QBR]
4. ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; [QBR] ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. [QBR]
5. ಅವರು ಯೆಹೋವನ ಕಾರ್ಯಗಳನ್ನೂ ಮತ್ತು [QBR] ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; [QBR] ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. [QBR]
6. ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; [QBR] ಆತನಿಗೆ ಸ್ತೋತ್ರವಾಗಲಿ. [QBR]
7. ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; [QBR] ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. [QBR] ಆದಕಾರಣ ನನ್ನ ಹೃದಯವು ಹರ್ಷಿಸುವುದು; [QBR] ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. [QBR]
8. ಯೆಹೋವನು ತನ್ನ ಜನರಿಗೆ ಬಲವೂ, [QBR] ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. [QBR]
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು; [QBR] ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. [QBR] ನೀನು ಅವರ ಕುರುಬನಾಗಿರು; [QBR] ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. [PE]

Notes

No Verse Added

Total 150 Chapters, Current Chapter 28 of Total Chapters 150
ಕೀರ್ತನೆಗಳು 28:21
1. {ಭಕ್ತನ ಸ್ತುತಿ} PS ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;
ಕೇಳದೆ ಇರಬೇಡ.
ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2. ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ
ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;
ನನ್ನ ವಿಜ್ಞಾಪನೆಯನ್ನು ಲಾಲಿಸು.
3. ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ
ನನ್ನನ್ನೂ ಎಳೆದುಕೊಂಡು ಹೋಗಬೇಡ.
ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,
ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4. ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;
ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5. ಅವರು ಯೆಹೋವನ ಕಾರ್ಯಗಳನ್ನೂ ಮತ್ತು
ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;
ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
6. ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;
ಆತನಿಗೆ ಸ್ತೋತ್ರವಾಗಲಿ.
7. ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
8. ಯೆಹೋವನು ತನ್ನ ಜನರಿಗೆ ಬಲವೂ,
ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು;
ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.
ನೀನು ಅವರ ಕುರುಬನಾಗಿರು;
ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. PE
Total 150 Chapters, Current Chapter 28 of Total Chapters 150
×

Alert

×

kannada Letters Keypad References