1. {ಭಕ್ತನ ಸ್ತುತಿ} PS ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;
ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. |
2. ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ
ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. |
3. ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ
ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು. |
4. ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;
ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. |
5. ಅವರು ಯೆಹೋವನ ಕಾರ್ಯಗಳನ್ನೂ ಮತ್ತು
ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. |
7. ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. |
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು;
ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. PE |