ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ಭಕ್ತನ ಸ್ತುತಿ} [PS] ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; [QBR] ಕೇಳದೆ ಇರಬೇಡ. [QBR] ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. [QBR]
2. ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ [QBR] ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; [QBR] ನನ್ನ ವಿಜ್ಞಾಪನೆಯನ್ನು ಲಾಲಿಸು. [QBR]
3. ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ [QBR] ನನ್ನನ್ನೂ ಎಳೆದುಕೊಂಡು ಹೋಗಬೇಡ. [QBR] ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, [QBR] ಒಳಗೆ ಕೇಡಾಗಲಿ ಎಂದು ಯೋಚಿಸುವವರು. [QBR]
4. ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; [QBR] ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. [QBR]
5. ಅವರು ಯೆಹೋವನ ಕಾರ್ಯಗಳನ್ನೂ ಮತ್ತು [QBR] ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; [QBR] ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. [QBR]
6. ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; [QBR] ಆತನಿಗೆ ಸ್ತೋತ್ರವಾಗಲಿ. [QBR]
7. ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; [QBR] ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. [QBR] ಆದಕಾರಣ ನನ್ನ ಹೃದಯವು ಹರ್ಷಿಸುವುದು; [QBR] ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. [QBR]
8. ಯೆಹೋವನು ತನ್ನ ಜನರಿಗೆ ಬಲವೂ, [QBR] ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. [QBR]
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು; [QBR] ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. [QBR] ನೀನು ಅವರ ಕುರುಬನಾಗಿರು; [QBR] ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
ಕೀರ್ತನೆಗಳು 28:87
ಭಕ್ತನ ಸ್ತುತಿ 1 ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. 2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. 3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು. 4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. 5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. 6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ. 7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. 8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
Common Bible Languages
West Indian Languages
×

Alert

×

kannada Letters Keypad References