ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#1ಭಕ್ತನ ಸ್ತುತಿ }[PS]*ದಾವೀದನ ಕೀರ್ತನೆ. *[PE][QS]ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; [QE][QS]ಕೇಳದೆ ಇರಬೇಡ. [QE][QS]ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. [QE]
2. [QS]ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ [QE][QS]ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; [QE][QS]ನನ್ನ ವಿಜ್ಞಾಪನೆಯನ್ನು ಲಾಲಿಸು. [QE]
3. [QS]ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ [QE][QS]ನನ್ನನ್ನೂ ಎಳೆದುಕೊಂಡು ಹೋಗಬೇಡ. [QE][QS]ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, [QE][QS]ಒಳಗೆ ಕೇಡಾಗಲಿ ಎಂದು ಯೋಚಿಸುವವರು. [QE]
4. [QS]ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; [QE][QS]ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. [QE]
5. [QS]ಅವರು ಯೆಹೋವನ ಕಾರ್ಯಗಳನ್ನೂ ಮತ್ತು [QE][QS]ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; [QE][QS]ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. [QE]
6. [QS]ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; [QE][QS]ಆತನಿಗೆ ಸ್ತೋತ್ರವಾಗಲಿ. [QE]
7. [QS]ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; [QE][QS]ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. [QE][QS]ಆದಕಾರಣ ನನ್ನ ಹೃದಯವು ಹರ್ಷಿಸುವುದು; [QE][QS]ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. [QE]
8. [QS]ಯೆಹೋವನು ತನ್ನ ಜನರಿಗೆ ಬಲವೂ, [QE][QS]ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. [QE]
9. [QS]ಯೆಹೋವನೇ, ನಿನ್ನ ಜನರನ್ನು ರಕ್ಷಿಸು; [QE][QS]ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. [QE][QS]ನೀನು ಅವರ ಕುರುಬನಾಗಿರು; [QE][QS]ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
ಭಕ್ತನ ಸ್ತುತಿ 1 ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. 2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. 3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು. 4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. 5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. 6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ. 7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. 8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
×

Alert

×

Kannada Letters Keypad References