ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವದೂತರುಗಳಿರಾ, ಪರಮಪ್ರಭಾವವು, [QBR] ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. [QBR]
2. ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; [QBR] ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. [QBR]
3. ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; [QBR] ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; [QBR] ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. [QBR]
4. ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, [QBR] ಎಷ್ಟೋ ಗಂಭೀರವಾದದ್ದು. [QBR]
5. ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; [QBR] ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. [QBR]
6. ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು [QBR] ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. [QBR]
7. ಯೆಹೋವನ ಗರ್ಜನೆಗೆ ಮಿಂಚುಗಳು [QBR] ಥಳಥಳನೆ ಹೊಳೆಯುತ್ತವೆ. [QBR]
8. ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; [QBR] ಕಾದೇಶ್ ಅರಣ್ಯವು ಕಂಪಿಸುತ್ತದೆ. [QBR]
9. [* ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ] ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; [QBR] ಕಾಡಿನ ಮರಗಳು ಬರಿದಾಗುತ್ತವೆ. [QBR] ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. [QBR]
10. ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; [QBR] ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. [QBR]
11. ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; [QBR] ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
ಕೀರ್ತನೆಗಳು 29:160
1 ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. 2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. 3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. 4 ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು. 5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. 6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. 7 ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. 8 ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ. 9 * ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. 10 ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. 11 ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
Common Bible Languages
West Indian Languages
×

Alert

×

kannada Letters Keypad References