ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ }[PS]*ದಾವೀದನ ಕೀರ್ತನೆ. [BR]ಯೆರೆ 10:13; ಯೆಶಾ 30:30 *[PE][QS]ದೇವದೂತರುಗಳಿರಾ, ಪರಮಪ್ರಭಾವವು, [QE][QS]ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. [QE]
2. [QS]ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; [QE][QS]ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. [QE]
3. [QS]ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; [QE][QS]ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; [QE][QS]ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. [QE]
4. [QS]ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, [QE][QS]ಎಷ್ಟೋ ಗಂಭೀರವಾದದ್ದು. [QE]
5. [QS]ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; [QE][QS]ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. [QE]
6. [QS]ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು [QE][QS]ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. [QE]
7. [QS]ಯೆಹೋವನ ಗರ್ಜನೆಗೆ ಮಿಂಚುಗಳು [QE][QS]ಥಳಥಳನೆ ಹೊಳೆಯುತ್ತವೆ. [QE]
8. [QS]ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; [QE][QS]ಕಾದೇಶ್ ಅರಣ್ಯವು ಕಂಪಿಸುತ್ತದೆ. [QE]
9. [QS] [* ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ ]ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; [QE][QS]ಕಾಡಿನ ಮರಗಳು ಬರಿದಾಗುತ್ತವೆ. [QE][QS]ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. [QE]
10. [QS]ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; [QE][QS]ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. [QE]
11. [QS]ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; [QE][QS]ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ 3 *ದಾವೀದನ ಕೀರ್ತನೆ.
ಯೆರೆ 10:13; ಯೆಶಾ 30:30 *
ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. 2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. 3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. 4 ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು. 5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. 6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. 7 ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. 8 ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ. 9 * ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. 10 ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. 11 ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
×

Alert

×

Kannada Letters Keypad References