ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; [QBR] ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. [QBR]
2. ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ [* ಅಥವಾ ರಕ್ಷಣೆಯುಂಟಾಗುವುದಿಲ್ಲ.] ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ
3. ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; [QBR] ನೀನು ನನ್ನ ಗೌರವಕ್ಕೆ ಆಧಾರನೂ, [QBR] ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. [QBR]
4. ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, [QBR] ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.
5. ಯೆಹೋವನು ನನ್ನನ್ನು ಕಾಪಾಡುವವನು, [QBR] ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. [QBR]
6. ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ [QBR] ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. [QBR]
7. ಯೆಹೋವನೇ, ನನ್ನ ದೇವರೇ, [QBR] ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, [QBR] ಎದ್ದು ಬಂದು ನನ್ನನ್ನು ರಕ್ಷಿಸು. [QBR]
8. [† ಅಥವಾ ರಕ್ಷಣೆಯು.] ಜಯವು ಯೆಹೋವನಿಂದಲೇ ಉಂಟಾಗುವುದು. [QBR] ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
ಕೀರ್ತನೆಗಳು 3:64
1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. 2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ * ಅಥವಾ ರಕ್ಷಣೆಯುಂಟಾಗುವುದಿಲ್ಲ. ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ. 5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. 6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. 7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. 8 ಅಥವಾ ರಕ್ಷಣೆಯು. ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
Common Bible Languages
West Indian Languages
×

Alert

×

kannada Letters Keypad References