ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, [QBR] ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. [QBR]
2. ಯೆಹೋವನೇ, ನನ್ನ ದೇವರೇ, [QBR] ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. [QBR]
3. ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; [QBR] ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. [QBR]
4. ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; [QBR] ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. [QBR]
5. ಆತನ ಕೋಪವು ಕ್ಷಣಮಾತ್ರವೇ; [QBR] ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; [QBR] ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, [QBR] ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. [QBR]
6. ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” [QBR] ಎಂದು ಹೇಳಿಕೊಂಡಿದ್ದೆನು. [QBR]
7. ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. [QBR] ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. [QBR]
8. ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, [QBR]
9. “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? [QBR] ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? [QBR]
10. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; [QBR] ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. [QBR]
11. ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; [QBR] ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, [QBR] ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. [QBR]
12. ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; [QBR] ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 150
ಕೀರ್ತನೆಗಳು 30:126
1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. 2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. 3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. 4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. 5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. 6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು. 7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. 8 ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, 9 “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? 10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. 11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. 12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 150
Common Bible Languages
West Indian Languages
×

Alert

×

kannada Letters Keypad References