1. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ,
ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. |
5. ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. |
7. ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ.
ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. |
9. “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು?
ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? |
11. ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. |
12. ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;
ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. PE |