ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು }[PS]*ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. [BR]ಕೀರ್ತ 6; ಯೋಹಾ 10:22 *[PE][QS]ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, [QE][QS]ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. [QE]
2. [QS]ಯೆಹೋವನೇ, ನನ್ನ ದೇವರೇ, [QE][QS]ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. [QE]
3. [QS]ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; [QE][QS]ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. [QE]
4. [QS]ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; [QE][QS]ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. [QE]
5. [QS]ಆತನ ಕೋಪವು ಕ್ಷಣಮಾತ್ರವೇ; [QE][QS]ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; [QE][QS]ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, [QE][QS]ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. [QE]
6. [QS]ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” [QE][QS]ಎಂದು ಹೇಳಿಕೊಂಡಿದ್ದೆನು. [QE]
7. [QS]ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. [QE][QS]ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. [QE]
8. [QS]ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, [QE]
9. [QS]“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? [QE][QS]ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? [QE]
10. [QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; [QE][QS]ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. [QE]
11. [QS]ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; [QE][QS]ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, [QE][QS]ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. [QE]
12. [QS]ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; [QE][QS]ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 150
ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು 3 *ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
ಕೀರ್ತ 6; ಯೋಹಾ 10:22 *
ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು. 2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. 3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. 4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. 5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. 6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು. 7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. 8 ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, 9 “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? 10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. 11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. 12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 150
×

Alert

×

Kannada Letters Keypad References