3. {#3ಕಷ್ಟದಲ್ಲಿರುವವರ ವಿಶ್ವಾಸದ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *[PE][QS]ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; [QE][QS]ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. [QE][QS]ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು. [QE]
2. [QS]ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; [QE][QS]ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು. [QE]
3. [QS]ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; [QE][QS]ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು. [QE]
4. [QS]ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ [QE][QS]ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; [QE]
5. [QS]ನೀನೇ ನನಗೆ ಆಧಾರವಲ್ಲವೇ; [QE][QS]ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. [QE][QS]ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. [QE]
6. [QS]ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; [QE][QS]ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. [QE]
7. [QS]ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; [QE][QS]ನಾನು ಕುಗ್ಗಿಹೋಗಿರುವುದನ್ನು ನೋಡಿ, [QE][QS]ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. [QE]
8. [QS]ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; [QE][QS]ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ. [QE]
9. [QS]ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. [QE][QS]ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು. [QE]
10. [QS]ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; [QE][QS]ನನ್ನ [* ಅಥವಾ ಅಪರಾಧದಿಂದ. ]ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; [QE][QS]ನನ್ನ ಎಲುಬುಗಳು ಸವೆದುಹೋಗಿವೆ. [QE]
11. [QS]ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; [QE][QS]ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. [QE][QS]ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; [QE][QS]ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. [QE]
12. [QS]ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; [QE][QS]ಒಡೆದ ಬೋಕಿಯಂತಿದ್ದೇನೆ. [QE]
13. [QS]ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; [QE][QS]ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; [QE][QS]ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. [QE]
14. [QS]ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; [QE][QS]ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. [QE]
15. [QS]ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; [QE][QS]ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು. [QE]
16. [QS]ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; [QE][QS]ಪ್ರೀತಿಯಿಂದ ನನ್ನನ್ನು ರಕ್ಷಿಸು. [QE]
17. [QS]ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. [QE][QS]ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. [QE]
18. [QS]ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ [QE][QS]ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. [QE]
19. [QS]ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, [QE][QS]ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ [QE][QS]ಎಷ್ಟೋ ವಿಶೇಷವಾಗಿವೆ. [QE]
20. [QS]ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ [QE][QS]ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; [QE][QS]ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. [QE]
21. [QS]ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, [QE][QS]ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. [QE]
22. [QS]ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; [QE][QS]ಆದರೂ ನಾನು ಮೊರೆಯಿಡಲು ನೀನು ಕೇಳಿದಿ. [QE]
23. [QS]ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. [QE][QS]ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; [QE][QS]ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ. [QE]
24. [QS]ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; [QE][QS]ನಿಮ್ಮ ಹೃದಯವು ಧೈರ್ಯದಿಂದಿರಲಿ. [QE]