1. ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;
ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು. |
5. ನೀನೇ ನನಗೆ ಆಧಾರವಲ್ಲವೇ;
ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. |
7. ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು;
ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. |
9. ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ.
ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು. |
10. ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ;
ನನ್ನ * ಅಥವಾ ಅಪರಾಧದಿಂದ. ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ. |
11. ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು;
ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. |
13. ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ;
ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. |
17. ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.
ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. |
18. ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ
ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. |
19. ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,
ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ. |
20. ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ
ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. |
21. ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ,
ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. |
22. ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು;
ಆದರೂ ನಾನು ಮೊರೆಯಿಡಲು ನೀನು ಕೇಳಿದಿ. |
23. ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ.
ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ. |