ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ} [PS] ಯಾರ ದ್ರೋಹವು ಪರಿಹಾರವಾಗಿದೆಯೋ, [QBR] ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. [QBR]
2. ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? [QBR] ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. [QBR]
3. ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, [QBR] ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. [QBR]
4. ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; [QBR] ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
5. ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು [QBR] ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. [QBR] ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
6. ಆದುದರಿಂದ ಭಕ್ತರೆಲ್ಲರು [* ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ.] ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; [QBR] ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. [QBR]
7. ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; [QBR] ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ
8. ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; [QBR] ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. [QBR]
9. ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ [QBR] ಹೇಸರಗತ್ತೆಯಂತಾಗಲಿ ಇರಬೇಡಿರಿ; [QBR] ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. [QBR]
10. ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; [QBR] ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. [QBR]
11. ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; [QBR] ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
ಕೀರ್ತನೆಗಳು 32:13
ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ 1 ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ 5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ 6 ಆದುದರಿಂದ ಭಕ್ತರೆಲ್ಲರು * ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ. ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. 7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ 8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. 9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. 10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
Common Bible Languages
West Indian Languages
×

Alert

×

kannada Letters Keypad References