1. {ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ} PS ಯಾರ ದ್ರೋಹವು ಪರಿಹಾರವಾಗಿದೆಯೋ,
ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. |
4. ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ |
5. ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ |
6. ಆದುದರಿಂದ ಭಕ್ತರೆಲ್ಲರು * ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ. ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;
ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. |
8. ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. |
9. ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ
ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. |
10. ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. |
11. ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;
ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. PE |