ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#1ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ }[PS]*ದಾವೀದನ ಪದ್ಯ. *[PE][QS]ಯಾರ ದ್ರೋಹವು ಪರಿಹಾರವಾಗಿದೆಯೋ, [QE][QS]ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. [QE]
2. [QS]ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? [QE][QS]ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. [QE]
3. [QS]ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, [QE][QS]ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. [QE]
4. [QS]ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; [QE][QS]ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. [QE][QSS]ಸೆಲಾ [QSE]
5. [QS]ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು [QE][QS]ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. [QE][QS]ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. [QE][QSS]ಸೆಲಾ [QSE]
6. [QS]ಆದುದರಿಂದ ಭಕ್ತರೆಲ್ಲರು [* ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ. ]ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; [QE][QS]ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. [QE]
7. [QS]ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; [QE][QS]ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. [QE][QSS]ಸೆಲಾ [QSE]
8. [QS]ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; [QE][QS]ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. [QE]
9. [QS]ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ [QE][QS]ಹೇಸರಗತ್ತೆಯಂತಾಗಲಿ ಇರಬೇಡಿರಿ; [QE][QS]ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. [QE]
10. [QS]ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; [QE][QS]ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. [QE]
11. [QS]ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; [QE][QS]ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ 1 ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. QSS ಸೆಲಾ SE 5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. QSS ಸೆಲಾ SE 6 ಆದುದರಿಂದ ಭಕ್ತರೆಲ್ಲರು * ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ. ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. 7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. QSS ಸೆಲಾ SE 8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. 9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. 10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
×

Alert

×

Kannada Letters Keypad References