ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; [QBR] ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. [QBR]
2. ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; [QBR] ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. [QBR]
3. ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; [QBR] ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. [QBR]
4. ಯೆಹೋವನ ವಚನವು ಯಥಾರ್ಥವಾದದ್ದು; [QBR] ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. [QBR]
5. ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; [QBR] ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. [QBR]
6. ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; [QBR] ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. [QBR]
7. ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; [QBR] ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. [QBR]
8. ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; [QBR] ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. [QBR]
9. ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; [QBR] ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. [QBR]
10. ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; [QBR] ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. [QBR]
11. ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; [QBR] ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. [QBR]
12. ಯಾರಿಗೆ ಯೆಹೋವನೇ ದೇವರಾಗಿದ್ದಾನೋ, [QBR] ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. [QBR]
13. ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; [QBR]
14. ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. [QBR]
15. ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, [QBR] ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. [QBR]
16. ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; [QBR] ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. [QBR]
17. ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; [QBR] ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. [QBR]
18. ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; [QBR] ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. [QBR]
19. ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; [QBR] ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. [QBR]
20. ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; [QBR] ನಮ್ಮ ಸಹಾಯವೂ, ಗುರಾಣಿಯೂ ಆತನೇ. [QBR]
21. ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; [QBR] ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. [QBR]
22. ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; [QBR] ನಿನ್ನ ಕೃಪೆಯು ನಮ್ಮ ಮೇಲೆ ಇರಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 33 / 150
ಕೀರ್ತನೆಗಳು 33:10
1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2 ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3 ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. 4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 6 ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. 7 ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. 8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. 9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. 10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. 11 ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; 14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. 15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. 16 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. 17 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. 18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19 ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. 22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 33 / 150
Common Bible Languages
West Indian Languages
×

Alert

×

kannada Letters Keypad References