ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ರಕ್ಷಕನನ್ನು ಕೀರ್ತಿಸುವ ಭಕ್ತ } [QS]ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; [QE][QS]ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. [QE]
2. [QS]ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; [QE][QS]ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. [QE]
3. [QS]ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; [QE][QS]ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. [QE]
4. [QS]ಯೆಹೋವನ ವಚನವು ಯಥಾರ್ಥವಾದದ್ದು; [QE][QS]ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. [QE]
5. [QS]ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; [QE][QS]ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. [QE]
6. [QS]ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; [QE][QS]ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. [QE]
7. [QS]ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; [QE][QS]ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. [QE]
8. [QS]ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; [QE][QS]ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. [QE]
9. [QS]ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; [QE][QS]ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. [QE]
10. [QS]ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; [QE][QS]ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. [QE]
11. [QS]ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; [QE][QS]ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. [QE]
12. [QS]ಯಾರಿಗೆ ಯೆಹೋವನೇ ದೇವರಾಗಿದ್ದಾನೋ, [QE][QS]ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. [QE]
13. [QS]ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; [QE]
14. [QS]ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. [QE]
15. [QS]ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, [QE][QS]ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. [QE]
16. [QS]ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; [QE][QS]ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. [QE]
17. [QS]ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; [QE][QS]ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. [QE]
18. [QS]ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; [QE][QS]ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. [QE]
19. [QS]ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; [QE][QS]ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. [QE]
20. [QS]ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; [QE][QS]ನಮ್ಮ ಸಹಾಯವೂ, ಗುರಾಣಿಯೂ ಆತನೇ. [QE]
21. [QS]ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; [QE][QS]ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. [QE]
22. [QS]ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; [QE][QS]ನಿನ್ನ ಕೃಪೆಯು ನಮ್ಮ ಮೇಲೆ ಇರಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 33 / 150
ರಕ್ಷಕನನ್ನು ಕೀರ್ತಿಸುವ ಭಕ್ತ 1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2 ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3 ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. 4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 6 ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. 7 ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. 8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. 9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. 10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. 11 ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; 14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. 15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. 16 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. 17 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. 18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19 ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. 22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 33 / 150
×

Alert

×

Kannada Letters Keypad References