ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ }[PS]*ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. *[PE][QS]ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; [QE][QS]ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. [QE]
2. [QS]ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; [QE][QS]ಇದನ್ನು ದೀನರು ಕೇಳಿ ಸಂತೋಷಿಸುವರು. [QE]
3. [QS]ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; [QE][QS]ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. [QE]
4. [QS]ನಾನು ಯೆಹೋವನ ಸನ್ನಿಧಿಯಲ್ಲಿ [* ಅಥವಾ ಹುಡುಕಿದೆನು. ]ಬೇಡಿಕೊಳ್ಳಲು, [QE][QS]ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. [QE]
5. [QS]ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; [QE][QS]ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. [QE]
6. [QS]ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, [QE][QS]ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. [QE]
7. [QS]ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, [QE][QS]ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. [QE]
8. [QS]ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; [QE][QS]ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. [QE]
9. [QS]ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; [QE][QS]ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. [QE]
10. [QS]ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; [QE][QS]ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. [QE]
11. [QS]ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; [QE][QS]ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. [QE]
12. [QS]ದೀರ್ಘಾಯುಷ್ಯವು ಬೇಕೋ? [QE][QS]ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? [QE]
13. [QS]ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; [QE][QS]ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. [QE]
14. [QS]ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; [QE][QS]ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. [QE]
15. [QS]ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; [QE][QS]ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. [QE]
16. [QS]ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; [QE][QS]ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. [QE]
17. [QS]ಯೆಹೋವನು ನೀತಿವಂತರ ಕೂಗನ್ನು ಕೇಳಿ, [QE][QS]ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. [QE]
18. [QS]ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; [QE][QS]ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. [QE]
19. [QS]ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, [QE][QS]ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. [QE]
20. [QS]ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; [QE][QS]ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. [QE]
21. [QS]ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; [QE][QS]ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. [QE]
22. [QS]ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. [QE][QS]ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 34 / 150
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ 3 ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4 ನಾನು ಯೆಹೋವನ ಸನ್ನಿಧಿಯಲ್ಲಿ * ಅಥವಾ ಹುಡುಕಿದೆನು. ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. 9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. 10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. 11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. 12 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? 13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. 14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. 15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. 16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17 ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 19 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. 20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. 21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. 22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 34 / 150
×

Alert

×

Kannada Letters Keypad References